Google search engine
Homeಜಿಲ್ಲೆ ಸುದ್ದಿಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ...

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ.

ಬೆಂಗಳೂರು ವಿಧಾನಸೌಧ ಡಿ 06 ಪೌರ ವಾಣಿ: 6.12.2025 ಶನಿವಾರ ದಿನ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಸನ್ಮಾನ್ಯ ಮುಖ್ಯಮಂತ್ರಿ ಎಂ ಸಿದ್ದರಾಮಯ್ಯನವರು ಮಾತನಾಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿವ ಮಹಾಜ್ಞಾನಿ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾವ್ಯಕ್ತಿ ಇವತ್ತು ನಾನು ಮುಖ್ಯಮಂತ್ರಿ ಆಗಿ ಇಲ್ಲಿಗೆ ಬಂದಿದ್ದು ಏನಂದ್ರೆ ಅದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು. ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಕಾರ್ಯಧ್ಯಕ್ಷರಾದ ಜಂಬೂ ದ್ವೀಪ ಸಿದ್ದರಾಜು ರವರು ಮಾತನಾಡಿ ಭಾರತ ರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಆದಿ ಜಾಂಬವ ಸಂಘದ ಪರವಾಗಿ ನಾವು, ನಮ್ಮ ಪದಾಧಿಕಾರಿಗಳು,ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿಡಿವಿ ಎಂದು ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments