ಮೈಸೂರು ದಸರಾ ವಸ್ತುಪ್ರದರ್ಶನದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ (ಲಿಡ್ಕರ್) ವತಿಯಿಂದ ನಿರ್ಮಿಸಲಾದ ವಸ್ತುಪ್ರದರ್ಶನ ಮಳಿಗೆಯನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಉದ್ಘಾಟಿಸಿದರು.
ನಿಗಮವು 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಚರ್ಮ ಕುಶಲಕರ್ಮಿಗಳ ಪಾರಂಪರಿಕ ಇತಿಹಾಸ, ಕೌಶಲ್ಯ ಮತ್ತು ಪರಂಪರೆಯನ್ನು ಪರಿಚಯಿಸುವ ವಿಶೇಷ ಪ್ರದರ್ಶನ ಮಳಿಗೆಯು ಗಮನ ಸೆಳೆಯಿತು. ಚರ್ಮದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಲಾಗಿದ್ದು, ಅವುಗಳ ಗುಣಮಟ್ಟ ಹಾಗೂ ವೈವಿಧ್ಯತೆ ಗ್ರಾಹಕರನ್ನು ಆಕರ್ಷಿಸಿತು.
ಲಿಡ್ಕರ್ ಸಂಸ್ಥೆಯು ಇದೇ ಅಕ್ಟೋಬರ್ 28ರಂದು ತನ್ನ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ರಘುಮೂರ್ತಿ, ಸರ್ಕಾರದ ಕಾರ್ಯದರ್ಶಿ ಶ್ರೀ ಮೋಹನ್ ರಾಜ್, ಆಯುಕ್ತರಾದ ಶ್ರೀ ನಾಗರಾಜು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ರಾಮಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಮಂಜುನಾಥ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಅಶೋಕ ಸಾಲಪ್ಪ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ, ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಚ್. ನಟರಾಜ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





